ದಸರಾ ಫಲಪುಷ್ಪ ಪ್ರದರ್ಶನ : ಸಿದ್ಧತೆ ಪರಿಶೀಲಿಸಿದ ಸಚಿವ ಸೋಮಶೇಖರ್

Published on

ಮೈಸೂರು: ನಾಡಹಬ್ಬ ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ನಗರದ ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸಿದ್ಧತೆ ಪರಿಶೀಲಿಸಿದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 50 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಪುಷ್ಪಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಸಾರ್ವಜನಿಕರು ವೀಕ್ಷಿಸಬಹುದು. ಸೆ.26ರಿಂದ ಅ.5ರವರೆಗೆ ಫಲಪುಷ್ಪ ಪ್ರದರ್ಶನ ಇರಲಿದೆ. ಬೇಡಿಕೆ ಬಂದರೆ ಮತ್ತೆ ಮೂರು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net