ಬೂತ್ ಮಟ್ಟದ ಕಮಿಟಿ ಸಭೆ

dasarahalli dhananjay.
Published on

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ರಾಜಗೋಪಾಲನಗರ ವಾರ್ಡ್ ಕಮಿಟಿ ಸಭೆ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಗೌಡ ನೇತೃತ್ವದಲ್ಲಿ ಶನಿವಾರ ನಡೆಯಿತು.

ಪೀಣ್ಯದಾಸರಹಳ್ಳಿ: ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಜಿ. ಧನಂಜಯ ಗೌಡ ಅವರು ರಾಜಗೋಪಾಲನಗರ ವಾರ್ಡ್, ಬೂತ್ ಕಮಿಟಿ ಸಭೆ ನಡೆಸಿದರು. ಪೀಣ್ಯ 2ನೇಹಂತದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಪ್ರತಿಯೊಬ್ಬ ಕಾರ್ಯಕರ್ತ ಸಕ್ರಿಯವಾಗಿ ಪ್ರಚಾರದರಲ್ಲಿ ಪಾಲ್ಗೊಂಡು ಬ್ಲಾಕ್ ಹಾಗೂ ವಾರ್ಡ್ ಮಟ್ಟದಲ್ಲಿ ಜನರಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.

ಈಗಾಗಲೆ ಜೆಡಿಎಸ್‌ನ ಹಲವು ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಲ ಮಾಜಿ ನಗರಸಭಾ ಸದಸ್ಯರು ಕೂಡ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ದಾಸರಹಳ್ಳಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುವುದು ಶತಸಿದ್ಧ ಎಂದರು. ಪ್ರತಿಯೊಬ್ಬರೂ ಶ್ರಮ ವಹಿಸಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಜಯಭೇರಿ ಬಾರಿಸಲು ಸಹಕಾರ ನೀಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net