ತಾಯಿಯ ಅನಾರೋಗ್ಯಕ್ಕೆ ಬೇಸತ್ತ ಮಗಳು ಆತ್ಮಹತ್ಯೆ

Published on

ಕೊಳ್ಳೇಗಾಲ: ಪಟ್ಟಣದ ನಾಯಕರ ದೊಡ್ಡ ಬೀದಿಯಲ್ಲಿ ತಾಯಿಯ ಅನಾರೋಗ್ಯಕ್ಕೆ ಮನನೊಂದ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಯಕರ ದೊಡ್ಡ ಬೀದಿಯ ನಿವಾಸಿ ಪ್ರಕಾಶ್ ಅವರ ಪತ್ನಿ ಶೀಲಾ (35) ಆತ್ಮಹತ್ಯೆ ಮಾಡಿಕೊಂಡವರು. ತಾಯಿಯನ್ನು ತುಂಬ ಹಚ್ಚಿಕೊಂಡಿದ್ದ ಶೀಲಾ ಸ್ವಲ್ಪ ಆರೋಗ್ಯ ಕೆಟ್ಟರೂ ಬಹಳ ಚಿಂತಿಸುತ್ತಿದ್ದಳು. ಭಾನುವಾರ ಬೆಳಗಿನ ಜಾವ ಶೀಲಾಳ ತಾಯಿ ರಾಜೇಶ್ವರಿಗೆ ವಾಂತಿ, ಬೇಧಿ ಕಾಣಿಸಿಕೊಂಡು ಪರಿಸ್ಥಿತಿ ತೀವ್ರ ಹದಗೆಟ್ಟಿತ್ತು. ಈ ಕಾರಣಕ್ಕೆ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಮನನೊಂದ ಶೀಲಾ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳ ತಂದೆ ಪುಟ್ಟಮಾದ ನಾಯಕ ಪೊಲೀಸರಿಗೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net