ಹೃದಯಾಘಾತಕ್ಕೀಡಾದ ತಂದೆ; ಅಪ್ಪನ ಸಾವಿನ ಸುದ್ದಿ ಕೇಳಿ ಬಾವಿಗೆ ಹಾರಿ ಪ್ರಾಣ ಬಿಟ್ಲು 11ರ ಪುತ್ರಿ

crime
Published on

ಮದ್ಯಪ್ರದೇಶ: ದೇಶದಲ್ಲಿ ಜನರು ಇತ್ತೀಚೆಗೆ ಹೃದಯಾಘಾತದಿಂದ ಹಾಗೂ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ. ಆದರೆ ಇಲ್ಲಿ ತಂದೆ ಹೃದಯಾಘಾತದಿಂದ ಸಾವಿಗೀಡಾದ್ದನ್ನು ಕೇಳಿ ಪುತ್ರಿ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.

ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಬರ್ಖೇಡ ಜಾಗಿರ್ ಎಂಬ ಗ್ರಾಮದಲ್ಲಿನ ವ್ಯಕ್ತಿಯೊಬ್ಬರು ಶುಕ್ರವಾರ ಬೆಳಗ್ಗೆ ಎದೆನೋವಿಗೆ ಒಳಗಾಗಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವು ಸಂಭವಿಸಿದೆ ಎಂದು ವೈದ್ಯರು ಖಚಿತಪಡಿಸಿದ್ದರು.

ಆಸ್ಪತ್ರೆಯಲ್ಲಿದ್ದವರು ಮೊಬೈಲ್​ಫೋನ್ ಮೂಲಕ ಕರೆ ಮಾಡಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು. ಆಗ ತಂದೆಯ ಸಾವಿನ ಸುದ್ದಿಯನ್ನು ಕೇಳಿದ 11 ವರ್ಷದ ಪುತ್ರಿ ಹೊರಗೆ ಹೋದವಳು ಮರಳಿರಲಿಲ್ಲ. ಎಲ್ಲಿ ಹೋದಳು ಎಂದು ಮನೆಯರೆಲ್ಲ ಸ್ವಲ್ಪ ಹೊತ್ತಿನ ಬಳಿಕ ಹುಡುಕಾಟ ನಡೆಸಿದಾಗ ಆಕೆಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net