

ಬೆಂಗಳೂರು:
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್‌ನ್ನು ಈ ಬಾರಿ ಅಹಿಂದ ವರ್ಗಕ್ಕೆ ನೀಡಬೇಕು ಎಂದು ಜಬ್ಬಾರ್ ಮತ್ತು ವೀರಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಲೋಕಸಭಾ ಕ್ಷೇತ್ರದಲ್ಲಿ 10 ಲಕ್ಷಕ್ಕೂ ಹೆಚ್ಚು ಅಹಿಂದ ಮತಗಳಿವೆ. ಆದ್ದರಿಂದ ಈ ಬಾರಿ ಇದೇ ವರ್ಗದವರನ್ನು ಅಭ್ಯರ್ಥಿ ಮಾಡಿದರೆ ಗೆಲುವು ಸಾಧ್ಯವಾಗಲಿದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿತು.
ನಿಯೋಗದ ಮನವಿಯನ್ನು ಆಲಿಸಿದ ಸಿಎಂ, ಈ ಬಗ್ಗೆ ಪಕ್ಷದ ಮುಖಂಡರ ಜೊತೆಯಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಹಾಜರಿದ್ದರು.