ದಾವಣಗೆರೆಗೆ ರಣದೀಪ್ ಸಿಂಗ್ ಸುರ್ಜೆವಾಲ

dvg-Ranadeep-sing-surjewala-26.jpg
Published on

ದಾವಣಗೆರೆ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಶನಿವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ತಿಳಿಸಿದ್ದಾರೆ.
 ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ರಣತಂತ್ರ ರೂಪಿಸಲು ಮಧ್ಯಾಹ್ನ 12.30 ಕ್ಕೆ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಕಾಂಗ್ರೆಸ್‌ನ ಉನ್ನತ ಮಟ್ಟದ ಸಭೆಯ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
 ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಪಾಲ್ಗೊಳ್ಳುವರು.
 ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸದಸ್ಯರು, ಲೋಕಸಭೆಯ ಮಾಜಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net