ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಔಷಧ ಸಸ್ಯಗಳ ವನಮಹೋತ್ಸವ

sasi.jpg
Published on

 ದಾವಣಗೆರೆ : ನಗರದ ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಇತ್ತೀಚೆಗೆ ಔಷಧ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
 ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಬಿ.ಆರ್. ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಎಂ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ. ಗಿರೀಶ್ ಬೋಳಕಟ್ಟಿ ಅವರು ವನಮೋಹೋತ್ಸವದ ಪ್ರಾಮುಖ್ಯತೆ ಹಾಗೂ ಔಷಧ ಗಿಡಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
 ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು 80 ಔಷಧ ಸಸ್ಯಗಳು ಹಾಗೂ 200ಕ್ಕೂ ಹೆಚ್ಚು ಇತರೆ ಸಸಿಗಳನ್ನು ನೆಡುವುದರ ಮೂಲಕ ವನಮೋಹೋತ್ಸವನ್ನು ಉತ್ಸಾಹದಿಂದ ಆಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net