ದಾವಣಗೆರೆ ರೈತರಿಂದ ಶಿವಮೊಗ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ

davanagere farmers protest
ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಧನಂಜಯ, ಸತೀಶ್, ನಾಗರಾಜ, ಅಜಯಕುಮಾರ್, ಚಂದ್ರಶೇಖರ ಪೂಜಾರ್, ರಾಜಶೇಖರ ನಾಗಪ್ಪ, ಶಿವಕುಮಾರ, ನಾರಾಯಣ, ವಿರೂಪಾಕ್ಷಪ್ಪ ಮೊದಲಾದವರಿದ್ದರು.
Published on

ಶಿವಮೊಗ್ಗ: ಭದ್ರಾ ನಾಲೆ ಸೀಳಿ ಕುಡಿಯುವ ನೀರಿನ ಯೋಜನೆ ಕೈಗೊಂಡಿರುವುದನ್ನು ವಿರೋಧಿಸಿ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ನೂರಾರು ರೈತರು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ಕಚೇರಿ ಎದುರು ಬುಧವಾರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಸ್ಥಳದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಅಲ್ಲಿಂದ ತುಂಗಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ಕಚೇರಿಗೆ ತೆರಳಿದ ರೈತರು ಹೆದ್ದಾರಿಯಲ್ಲೇ ಸಭೆ ನಡೆಸಿದರು. ಬೇಡಿಕೆ ಈಡೇರಿಸುವ ಭರವಸೆಯನ್ನು ಲಿಖಿತ ರೂಪದಲ್ಲಿ ಕೊಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದರು.

ಅವೈಜ್ಞಾನಿಕ ಕಾಮಗಾರಿ ವಿರುದ್ಧ ಹೋರಾಟ ಆರಂಭಿಸಿದ್ದೇವೆ. ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೋರಾಟದ ಕಿಚ್ಚು ಹಚ್ಚಿದ್ದು ಶಿವಮೊಗ್ಗ ಜಿಲ್ಲೆ. ರಾಜ್ಯ ಸರ್ಕಾರ ಕಣ್ಣಿಗೆ ಕಪ್ಪು ಪಟ್ಟಿ ಹಚ್ಚಿ ಅನ್ಯಾಯ ಮಾಡುತ್ತಿದೆ. ವೈಯಕ್ತಿಕವಾಗಿ ಸಿಎಂ, ಡಿಸಿಎಂ ವಿರುದ್ಧ ಟೀಕೆ ಮಾಡಲ್ಲ. ಕುರ್ಚಿ ಕದನ ನಡೀತಿದೆ. ರೈತರ ಪರ ಕೆಲಸ ಮಾಡಲು ಸಮಯ ಇಲ್ಲ. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.

ರೈತ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಮಾಜಿ ಶಾಸಕ ಎಂ.ಬಸವರಾಜ ನಾಯಕ್ ಮಾತನಾಡಿದರು. ಸ್ಥಳಕ್ಕೆ ಸಿಇಒ ಹೇಮಂತ್ ಕುಮಾರ್ ಮನವಿ ಸ್ವೀಕರಿಸಿದರೂ ಪ್ರತಿಭಟನೆ ಕೈಬಿಡಲಿಲ್ಲ. ಹಾಗಾಗಿ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ಆನಂತರ ಬಿಡುಗಡೆಗೊಳಿಸಿದೆ. ಇದೇ ವೇಳೆ ರೈತರೊಬ್ಬರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಧನಂಜಯ, ಸತೀಶ್, ನಾಗರಾಜ, ಅಜಯಕುಮಾರ್, ಚಂದ್ರಶೇಖರ ಪೂಜಾರ್, ರಾಜಶೇಖರ ನಾಗಪ್ಪ, ಶಿವಕುಮಾರ, ನಾರಾಯಣ, ವಿರೂಪಾಕ್ಷಪ್ಪ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net