ಡೆಂೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ

ಡೆಂೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ
Published on

ಕೆ.ಆರ್.ನಗರ: ಡೆಂೆ ಜ್ವರ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್ ಹೇಳಿದರು.

ಪಟ್ಟಣದ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಭಗವದ್ಗೀತೆ ಪುಸ್ತಕ ವಿತರಣೆ ಮತ್ತ್ತು ಡೆಂೆ ಅನಾಹುತಗಳ ಪ್ರಾತ್ಯಕ್ಷಿತೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಡೆಂೆಗೆ ಯಾವುದೇ ಔಷಧಿ ಇಲ್ಲ. ಡೆಂೆ ಬಾರದಂತೆ ಎಚ್ಚರ ವಹಿಸಬೇಕು ಎಂದರು.

ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಡೆಂೆ ಲಕ್ಷಣಗಳಾಗಿದ್ದು, ರೋಗ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಪತ್ರಕರ್ತರ ದಿನ ಆಚರಿಸಲಾಯಿತು. ಪತ್ರಕರ್ತರಿಗೆ ಭಗವದ್ಗೀತೆ ಪುಸ್ತಕ ವಿತರಿಸಿ ಜೀವನ ಮೌಲ್ಯ ಹಾಗೂ ಸಾರಾಂಶ ಅರಿತುಕೊಳ್ಳುವಂತೆ ಆರೋಗ್ಯಾಧಿಕಾರಿ ನಟರಾಜ್ ಹೇಳಿದರು.

ಪ್ರಮುಖ ನಾಲ್ಕು ಅಂಗಗಳಲ್ಲಿ ಪತ್ರಿಕಾರಂಗವೂ ಸೇರಿ ಕಾರ್ಯನಿರ್ವಹಿಸುತ್ತಿದ್ದು, ಹಗಲಿರುಳು ಕೆಲಸ ನಿರ್ವಹಿಸುವ ಪತ್ರಕರ್ತರು ಆರೋಗ್ಯದ ಕಡೆ ಗಮನಹರಿಸಬೇಕು. ಸರ್ಕಾರ ಪತ್ರಕರ್ತರಿಗೆ ವಿಮೆ ಸೌಲಭ್ಯ ಕಲ್ಪಿಸಬೇಕು ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಹಿರಿಯ ಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್, ಮಹೇಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ದೊಡ್ಡಕೊಪ್ಪಲು ವಿನಯ್, ಪ್ರಧಾನಕಾರ್ಯದರ್ಶಿ ಭೇರ್ಯಮಹೇಶ್, ಎಂ.ಎಸ್.ರವಿಕುಮಾರ್, ಉಪಾಧ್ಯಕ್ಷ ಸಿ.ಸಿ.ಮಹದೇವ್, ಖಜಾಂಚಿ ನಾಗೇಶ್, ನಿರ್ದೇಶಕ ರಾಮಕೃಷ್ಣೇಗೌಡ, ಎಸ್.ಯೋಗಾನಂದ್, ಮಹಮದ್‌ಸಬೀರ್, ಸ್ಪಿನ್‌ಕೃಷ್ಣಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net