

ಶಿವಮೊಗ್ಗ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಡಿ.12ರ ಬೆಳಗ್ಗೆ 10.30ರಿಂದ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.
ಜಿಲ್ಲಾ ಹಾಗೂ ಶಿಕಾರಿಪುರ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು. ತಾಲೂಕಿನ ಜನರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ಒಬ್ಬರೇ ಸಲ್ಲಿಸಬೇಕು. ಸಾರ್ವಜನಿಕ ಅಹವಾಲು ಸಲ್ಲಿಸಲು ಗರಿಷ್ಠ ಇಬ್ಬರಿಗೆ ಅವಕಾಶವಿದೆ ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.