ಸ್ಥಳೀಯ ಸಂಪನ್ಮೂಲಾಧಾರಿತ ರಾಸಾಯನಿಕ ಮುಕ್ತ ಬೇಸಾಯ, ಮಣ್ಣಿನ ಆರೋಗ್ಯ, ಬೀಜ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ವಿಧಾನಗಳಿಗೆ ಒತ್ತು ನೀಡಿರುವ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಸ್ಥಳೀಯವಾಗಿ ಉತ್ಪಾದನೆಯಾಗುವ ಸಾವಯವ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಸ್ಥಾಪಿಸಿರುವ ಆಹಾರ ಸಂಸ್ಕರಣ ಘಟಕವನ್ನು ವೀಕ್ಷಿಸಿದರು. ವಿವಿಧ ತೋಟಗಳಲ್ಲಿ ಬೆಳೆಯುತ್ತಿರುವ ತರಕಾರಿ ಹಾಗೂ ಹಸಿರು ಸೊಪ್ಪಿನ ಗುಣಮಟ್ಟವನ್ನು ಪರಿಶೀಲಿಸಿದರು. ರೈತ ಮುಖಂಡರಾದ ಹೊನ್ನೂರು ಪ್ರಕಾಶ್ ಮಾಹಿತಿ ನೀಡಿದರು.