ಡಿಸಿಇಟಿ-25: ಅರ್ಜಿ ತಿದ್ದುಪಡಿಗೆ ಜೂನ್ 18,19ರಂದು ಅವಕಾಶ

kea
Published on

ಬೆಂಗಳೂರು: ಡಿಸಿಇಟಿ-2025ಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಜೂ.18 ಅಥವಾ 19ರಂದು ಖುದ್ದು ಹಾಜರಾಗುವಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಸಲ್ಲಿಸಿದ ಅರ್ಜಿ ಪ್ರತಿ, ಪ್ರವೇಶ ಪತ್ರ, ಪರಿಶೀಲನಾ ಪತ್ರ ಮತ್ತು ಅಗತ್ಯವಾದ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಪರಿಶೀಲನೆಗೆ ಹಾಜರಾಗುವ ಮೊದಲು ಜೂ.16ರಂದು ಸ್ಲಾಟ್ ಬುಕಿಂಗ್ ಮಾಡಿರಬೇಕು ಎಂದು ತಿಳಿಸಿದ್ದಾರೆ.

ನಿಗದಿತ ಸಮಯದಲ್ಲಿ ದಾಖಲೆಗಳನ್ನು ಸಲ್ಲಿಸದೇ ಇರುವವರು, ದಾಖಲೆಗಳು/ ಕ್ಷೇಮುಗಳು / ಡಿಪ್ಲೊಮಾ ಪರೀಕ್ಷೆಯ ಅಂಕಗಳು / ವೃತ್ತಿನಿರತ ಕ್ಷೇಮುಗಳನ್ನು ಸರಿಯಾಗಿ ನಮೂದಿಸದವರು ಈ ಅಂತಿಮ ಅವಕಾಶವನ್ನು ಬಳಸಿಕೊಳ್ಳಬಹುದು. ಎಲ್ಲಾ ಮಾಹಿತಿ ಸರಿ ಇರುವವರು ಕೆಇಎ ಕಚೇರಿಗೆ ಬರುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನಾಟಾ ಅಂಕ ನಮೂದು:

ಡಿಪ್ಲೊಮಾ ಮೂಲಕ ಆರ್ಕಿಟೆಕ್ಟರ್ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ 2025ರ ನಾಟಾ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ನಾಟಾ -2025ರಲ್ಲಿ ಪಡೆದಿರುವ ಅಂಕಗಳನ್ನು ಜೂ.17 ಮತ್ತು18ರಂದು ಪ್ರಾಧಿಕಾರದ ಪೋರ್ಟಲ್‌ನಲ್ಲಿ ನಮೂದಿಸಲು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net