

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆ ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಹಾಗೂ ಎಡಿಟಿಂಗ್ ಗೆ ಅವಕಾಶ ನೀಡಿದ್ದ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದರು. ಆ ಎಲ್ಲ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲನೆ ಮಾಡಿ, ಯಾರೆಲ್ಲ ಕ್ಲೇಮ್ಗೆ ಅರ್ಹರಿದ್ದಾರೆ? ಯಾರಿಲ್ಲ ಎಂಬುದರ ಪಟ್ಟಿಯನ್ನು ನೀಡಿದ್ದು, ಅದನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.