ರೈತರ ಹಿತದ ಜತೆಗೆ ನ್ಯಾಯಾಲಯದ ನಿರ್ಧಾರಕ್ಕೆ ಆದ್ಯತೆ ಕೊಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್​

Dk Shivakumar
Published on

ಬೆಂಗಳೂರು: ರಾಜ್ಯಕ್ಕೆ ಸಂಬಂಧಿಸಿದ ಜಲ ವಿವಾದ, ಅಣೆಕಟ್ಟುಗಳಲ್ಲಿನ ನೀರಿನ ಪರಿಸ್ಥಿತಿ ತಿಳಿಯಲು ಆಗಸ್ಟ್​ 23ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಸಭೆಗೆ ಕೆಲವು ಸಂಸದರನ್ನು ಆಹ್ವಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರವಾಗಿ ಕಾನೂನು ಹೋರಾಟ ಯಾವ ರೀತಿ ಮಾಬೇಕೆಂಬ ವಿಚಾರವನ್ನು ಅಡ್ವೋಕೇಟ್​ ​ ಜನರಲ್​ ಅವರ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿಲ್ಲ. ರಾಜ್ಯದ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯವಾಗಿದ್ದು, ಸದ್ಯದ ಪರಿಸ್ಥಿತಿ ಕುರಿತಾಗಿ ಚರ್ಚಿಸಲು ಆಗಸ್ಟ್​ 23ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್​ನವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟ್ಟಿದ್ದಾರೆ. ಅವರ ಕಾಲದಲ್ಲಿ ಏನಾಗಿತ್ತು ಎಂಬ ವಿವಾರವನ್ನು ಮೊದಲು ತಿಳಿದುಕೊಳ್ಳಲಿ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದೆಂಬ ಕಾರಣಕ್ಕೆ ಸರ್ವಪಕ್ಷ ಸಭೆ ಕರೆಯಲಾಗಿದೆ. ಸಭೆಗೆ ಕೆಲವು ಸಂಸದರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್​ನಲ್ಲಿ ಆಗಸ್ಟ್​ 21ರಂದು ಅರ್ಜಿ ಸಲ್ಲಿಸುತ್ತಿದ್ದೇವೆ. ನೀರು ಹರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತ ಕಾಯಬೇಕು. ನ್ಯಾಯಾಲಯದ ನಿರ್ಧಾರಕ್ಕೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net