ವಿಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಸಿಎಂ DK Shivakumar

DK Shivakumar
Published on

ಬೆಂಗಳೂರು: ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು (Heavy Rains) ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ (Nature) ಕಡಿವಾಣ ಹಾಕಲು ಸಾಧ್ಯವೇ, ಚಂಡಮಾರುತ (Storm) ತಡೆಯಲು ಸಾಧ್ಯವೇ ಇದನ್ನು ಅರ್ಥ ಮಾಡಿಕೊಳ್ಳದ ವಿಪಕ್ಷಗಳು (Opposition Parties) ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ (Deputy Chief Minister) ಡಿ.ಕೆ. ಶಿವಕುಮಾರ್​ (DK Shivakumar) ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ (Heavy Rains) ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (Precautionary Measures) ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯಿಂದಾಗಿ ಸಂಚಾರ ದಟ್ಟಣೆಯಾಗಲಿದ್ದು (Traffic Jam), ಸಾರ್ವಜನಿಕರು (Public) ಎಚ್ಚರಿಕೆಯಿಂದ ಇರಬೇಕು. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಬಳಿಕ ನಾನು ಪೊಲೀಸ್ ಇಲಾಖೆ, ಬಿಬಿಎಂಪಿ (BBMP) ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ (Opposition Parties) ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ, ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar)​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net