ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: DCM DK Shivakumar

DK Shivakumar
Published on

ತಿರುಚಿರಾಪಲ್ಲಿ: ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನನಗೆ ತುಂಬಾ ಸಂತೋಷವಾಯಿತು. ನಾನು ಸಹ ನನ್ನ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಮಾನವೀಯತೆ ಮತ್ತು ಶಿಸ್ತನ್ನು ಇಲ್ಲಿಂದ ವಿದ್ಯಾರ್ಥಿಗಳು ಕಲಿಯಬಹುದು. ಜೊತೆಗೆ ನಾಯಕತ್ವ ಗುಣವನ್ನು ಇದು ಬೆಳೆಸುತ್ತದೆ. ಯುವ ಜನತೆಯ ವ್ಯಕ್ತಿತ್ವ ಇದರಿಂದ ಗಟ್ಟಿಯಾಗುತ್ತದೆ. ತಮಿಳುನಾಡು ಸರ್ಕಾರ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ಇಷ್ಟು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net