

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಡಿಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಚುನಾವಣೆಗೆ ಮುನ್ನ ರಾಜಕೀಯ ಸಂಚಲನ ಮೂಡಿಸಿದ್ದ ಡಿಸಿಎಂ ವಿಚಾರವನ್ನು ಸಚಿವರಾಜದ ಕೆ.ಎನ್.ರಾಜಣ್ಣ, ಜಮೀರ್ ಅಹ್ಮದ್ ಮತ್ತೆ ಚರ್ಚಾ ವಸ್ತುವಾಗಿಸಿದ್ದಾರೆ.
ಈ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ, ಹೆಚ್ಚುವರಿ ಡಿಸಿಎಂ ಮಾಡಿದರೆ ತಪ್ಪಿಲ್ಲ ಎಂದು ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ
ನನ್ನ ಅಭಿಪ್ರಾಯ ಏನೂ ಕೇಳಿ ಡಿಸಿಎಂ ಮಾಡುವುದಿಲ್ಲ ಎಂದು ಹೆಚ್ಚುವರಿ ಡಿಸಿಎಂ ನೇಮಕದ ವಿಚಾರದಲ್ಲಿ ಡಾ.ಪರಮೇಶ್ವರ್ ಅಂತರ ಕಾಯ್ದುಕೊಂಡಿದ್ದಾರೆ.
ಸೂರಜ್ ರೇವಣ್ಣ ವಿರುದ್ದ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ರೀತಿಯ ಪ್ರಕರಣಗಳನ್ನು ಸಿಐಇಗೆ ಕೊಡಬೇಕಾಗುತ್ತದೆ. ಹಾಗಾಗಿ ಸಿಐಡಿಗೆ ಕೊಟ್ಟಿದ್ದೇವೆ. ಪ್ರಕರಣದ ವಿಚಾರದಲ್ಲಿ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತಾರೆ. ಇದರಲ್ಲಿ ರಾಜಕೀಯ ಏನೂ ಇಲ್ಲ. ರಾಜಕೀಯ ಪ್ರೇರಿತ ಎನ್ನುವುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಡಾ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.