ನಿನ್ನೆ ರಾತ್ರಿಯಿಂದ ಮಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ತೀವ್ರತೆಗೆ ಮನೆ ಹಿಂಭಾಗದಲ್ಲಿದ್ದ ಗುಡ್ಡ ಕುಸಿದು ಬಿದ್ದಿದೆ. ಇದರಿಂದಾಗಿ ಕೆಳ ಭಾಗದಲ್ಲಿ ನಾಲ್ಕು ಪ್ರತ್ಯೇಕ ಕುಟುಂಬಗಳು ವಾಸವಿದ್ದ ಹಳೆ ಮನೆಯ ಕಟ್ಟಡಕ್ಕೆ ಮಣ್ಣು ಬಿದ್ದಿದ್ದು ಒಂದು ಭಾಗ ತೀವ್ರ ಹಾನಿಯಾಗಿದೆ. ಬಿಹಾರ ಮೂಲದ ಲಾಲ್ ಬಾಬು (37) ಮತ್ತು ಆತನ ಪತ್ನಿ ಇಂದು (34) ಹಾಗೂ ಅವರ ನಾಲ್ಕು ಮಕ್ಕಳು ಒಂದು ಮನೆಯಲ್ಲಿ ಎಂಟು ವರ್ಷಗಳಿಂದ ನೆಲೆಸಿದ್ದರು. ಅಲ್ಕಾ(14), ಅನುಷ್ಕಾ(11), ಅನಾಮಿಕ (7) ಮತ್ತು ತನು (3) ಎಂಬ ಮಕ್ಕಳಿದ್ದು ಈ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಬಗ್ಗೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ 20 ಶಂಕಿಸಿದ್ದಾರೆ. ಅನಾಮಿಕ ಮತ್ತು ತನು ಎಂಬ ಇಬ್ಬರು ಸಣ್ಣ ಮಕ್ಕಳು ದುರಂತದಲ್ಲಿ ಸಾವನ್ನಪ್ಪಿದ್ದಾಗಿ ಪೊಲೀಸರು ತಿಳಿಸಿದ್ದಾರೆ.