ಹಾಸಿಗೆಯೊಳಗೆ ಕೊಳೆತ ಸ್ಥಿತಿಯಲ್ಲಿತ್ತು ಅಪರಿಚಿತ ವ್ಯಕ್ತಿಯ ಶವ!

Pub-crime-1
Published on

ಬೆಂಗಳೂರು: ಹಾಸಿಗೆಯೊಂದರ ಒಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ಬಳಿ ಈ ಶವ ಕಂಡುಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಳಿ ಇರುವ ಡಿ ಮಾರ್ಟ್ ಸಮೀಪ ಅಂದಾಜು 60 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.

ಹಾಸಿಗೆಯಲ್ಲಿ ಸುತ್ತಿಡಲಾಗಿದ್ದ ಈ ಶವ, ಕೊಳೆತ ಸ್ಥಿತಿಯಲ್ಲಿದೆ. ಕೊಳೆತ ದುರ್ವಾಸನೆಯಿಂದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net