ಶಿಕ್ಷಕರ ವರ್ಗಕ್ಕೆ 15 ದಿನ ಗಡುವು: ಮುಖ್ಯ ಕಾರ್ಯದರ್ಶಿಗೆ ಪತ್ರ

Teachers
Published on

ಬೆಂಗಳೂರು: ಮುಂದಿನ 15 ದಿನದ ಒಳಗೆ ವರ್ಗಾವಣೆ ಪ್ರಕ್ರಿಯೆ ಆರಂಭಿಸದಿದ್ದಲ್ಲಿ ಎಲ್ಲ ಹಂತದ ಶಿಕ್ಷಕ ಪ್ರತಿನಿಧಿಗಳು, ಪದಾಧಿಕಾರಿಗಳು ರಾಜ್ಯ ಮಟ್ಟದಲ್ಲಿ ಹೋರಾಟಕ್ಕಿಳಿಯಲಿದ್ದಾರೆಂದು ಎಚ್ಚರಿಸಿ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

‘ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಮೂರ್ನಾಲ್ಕು ತಿಂಗಳಿಂದ ಹಲವು ಬಾರಿ ವಿನಂತಿಸಿದ್ದೇವೆ. ಪ್ರತಿ ಭೇಟಿಯಲ್ಲೂ ನೀವು ವರ್ಗಾವಣೆಯಲ್ಲಿ ಎದುರಾಗುತ್ತಿರುವ ಅಡೆತಡೆಗಳನ್ನು ಕಾನೂನಾತ್ಮಕ ಅಂಶ ಪರಿಗಣಿಸಿ ವರ್ಗ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದ್ದೀರಿ. ಆದಾಗ್ಯೂ ವರ್ಗಾವಣೆ ಆಗಿಲ್ಲ. ಮುಂದಿನ 15 ದಿನಗಳ ಒಳಗೆ ವರ್ಗಾವಣೆ ಪ್ರಕ್ರಿಯೆ ನಡೆಯದೇ ಇದ್ದರೆ ರಾಜ್ಯದ ಪ್ರಾಥಮಿಕ, ಪ್ರೌಢಶಿಕ್ಷಣ, ಪದವಿ ಪೂರ್ವ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಸೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಎದುರು ಅನಿರ್ದಿಷ್ಟ ಅವಧಿ ಧರಣಿ ನಡೆಸಲು ತೀರ್ವನಿಸಿರುವುದಾಗಿ ಸಮಿತಿಯ ಶಂಭುಲಿಂಗನಗೌಡ ಪಾಟೀಲ, ಎಚ್.ಕೆ.ಮಂಜುನಾಥ್, ನಿಂಗೇಗೌಡ್ರು, ಚಂದ್ರಶೇಖರ ನುಗ್ಗಲಿ ಮತ್ತಿತರರು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net