

ಲಖನೌ: ಹುಟ್ಟಿನಿಂದಲೇ ಮಾತನಾಡುವ ಹಾಗೂ ಕೇಳಿಸಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದ ಬಾಲಕಿಯೊಬ್ಬಳ ಮೇಲೆ ಊರ ಯುವಕನೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಭೂತಾ ಪ್ರದೇಶದ ಗ್ರಾಮವೊಂದರಲ್ಲಿ ಇಂತಹ ಘೋರ ಕೃತ್ಯ ನಡೆದಿದೆ. ಸೋಮವಾರ ಸಂಜೆ ವೇಳೆ 16 ವರ್ಷದ ಮೂಗಿ-ಕಿವುಡಿ ಬಾಲಕಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಳು. ಆ ವೇಳೆಗೆ ಅಲ್ಲಿಗೆ ಬಂದ ಯುವಕ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಯಾರೂ ಇರದ ತನ್ನ ಮನೆಯಲ್ಲಿ ಆಕೆಯನ್ನು ಕೂಡಿ ಹಾಕಿಕೊಂಡು ಅತ್ಯಾಚಾರವೆಸಗಿದ್ದಾನೆ.
ಈ ವಿಚಾರದಲ್ಲಿ ಬಾಲಕಿಯ ತಂದೆ ಮತ್ತು ಕೆಲ ಗ್ರಾಮಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಗ್ರಾಮಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಎಳೆದೊಯ್ದಿದ್ದಾರೆ. ಆ ಹೊತ್ತಿಗಾಗಲೇ ಆರೋಪಿ ಊರು ಬಿಟ್ಟು ಓಡಿಹೋಗುವ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ. ಬಾಲಕಿಯನ್ನು ಕೌನ್ಸೆಲಿಂಗ್ಗೆ ಒಳಪಡಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)