ವಿಶ್ವನಾಥ್‌ಗೆ ಕೊಲೆ ಬೆದೆರಿಕೆ, ಅರ್ಜಿ ವಜಾ: ಎಂ.ಎನ್.ಗೋಪಾಲಕೃಷ್ಣ ಮನವಿ ತಿರಸ್ಕೃತ

highcourt
Published on

ಬೆಂಗಳೂರು: ಶಾಸಕ ಎಸ್.ಆರ್ ವಿಶ್ವನಾಥ್‌ಗೆ ಕೊಲೆ ಬೆದೆರಿಕೆಯೊಡ್ಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಿಸಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎಂ.ಎನ್.ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೆಸರಘಟ್ಟ ಹೋಬಳಿಯ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರ ಏಕಸದಸ್ಯಪೀಠ ಈ ಆದೇಶ ನೀಡಿದೆ. ನ್ಯಾಯಾಲಯದ ಆದೇಶದಿಂದಾಗಿ ತನಿಖೆಗೆ ಹಾದಿ ಸುಗಮವಾಗಿದೆ. ವಾದ-ಪ್ರತಿವಾದ ಆಲಿಸಿದ ಪೀಠ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿ ಪೆನ್ ಡ್ರೈವ್, ಪತ್ರ ಸೇರಿದಂತೆ ಸಾಕಷ್ಟು ಸಾಕ್ಷ್ಯವನ್ನು ಸಂಗ್ರಹ ಮಾಡಿದ್ದಾರೆ. ಮೇಲ್ನೋಟಕ್ಕೆ ಆರೋಪಿಯ ವಿರುದ್ಧ ದೂರುದಾರರು ಮಾಡಿರುವ ಆರೋಪಕ್ಕೆ ಸಾಕ ಸಾಕಷ್ಟು ಪುರಾವೆ ದೊರೆತಿದೆ.

ಅಲ್ಲದೆ, ತನಿಖಾಧಿಕಾರಿಯಿಂದ ವಿಸ್ತೃತ ತನಿಖೆಯಿಂದ ಅರ್ಜಿದಾರರ ವಿರುದ್ಧ ದೂರುದಾರ ವಿಶ್ವನಾಥ್ ಮಾಡಿರುವ ಆರೋಪಗಳ ಸತ್ಯಾಂಶ ಹೊರಬರಲು ಸಾಧ್ಯ. ಹಾಗಾಗಿ ಈ ಹಂತದಲ್ಲಿ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net