ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Kerala BombBlast
Published on

ತಿರುವನಂತಪುರಂ: ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ತೀವ್ರ ಸುಟ್ಟ ಗಾಯಗಳಿಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದ್ದು, ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಕ್ಟೋಬರ್ 29 ರಂದು ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೋಲಿ ಜಾಯ್ ಶೇ.70ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ಶರಣಾಗಿದ್ದು, ಉಗ್ರರ ಕೈವಾಡವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net