ಮೊರಾಕ್ಕೋದಲ್ಲಿ ಭೂಕಂಪ; ಸಾವಿನ ಸಂಖ್ಯೆ 820ಕ್ಕೆ ಏರಿಕೆ

Earth quake
Published on

ಮೊರಾಕ್ಕೋ: ಆಫ್ರಿಕಾದ ಮೊರಾಕ್ಕೋದಲ್ಲಿ ಸಂಭವಿಸಿದ 7.2 ತೀವ್ತತೆಯ ಭೂಕಂಪನದಲ್ಲಿ ಸಾವಿಗೀಡಾದವರ ಸಂಖ್ಯೆ 820ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 672 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 205 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್​ 8ರ ತಡರಾತ್ರಿ 11 ಘಂಟೆ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ. ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳಲ್ಲಿ ಸಾವುನೋವುಗಳು ವರದಿಯಾಗಿವೆ ಎಂದು ಮೊರಾಕ್ಕೋದ ಆಂತರಿಕ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭೂಕಂಪದಿಂದ ಮೃತಪಟ್ಟವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ಮೊರಾಕ್ಕೋದಲ್ಲಿ ಭೂಕಂಪದಿಂದ ಆಗಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕ್ಕೋಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net