

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಜೋಯಿಸರಹರಳಹಳ್ಳಿಯಲ್ಲಿ ಗುರುವಾರ ನಡೆದಿದೆ.
ಉಮೇಶಪ್ಪ ಹವಳಪ್ಪ ತಳವಾರ (49) ಮೃತ ರೈತ.
ಇವರು ಕೃಷಿಗಾಗಿ ಮಾಡಿಕೊಂಡಿದ್ದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ...
ಮೃತ ರೈತನ ಶವವನ್ನು ನಗರದ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರಿಟ್ಟು ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಮುಳ್ಳುಸಜ್ಜೆ ಕಳೆ ನಾಶ ಪಡಿಸಲು ಸೂಕ್ತ ಔಷಧ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡರಾದ ರವೀಂದ್ರಗೌಡ ಪಾಟೀಲ, ಚಂದ್ರಣ್ಣ ಬೇಡರ, ನಾಗಪ್ಪ ಸಣ್ಮನಿ, ಕರಬಸಪ್ಪ ಕೂಲೇರ, ಪರಮೇಶಪ್ಪ ತಳವಾರ, ಗುರುರಾಜ ಕೊಂಡಜ್ಜಿ, ರಾಮಪ್ಪ ಬೆನ್ನೂರು, ಹನುಮಂತಪ್ಪ ಹೊಸಳ್ಳಿ, ಬಸವಂತಪ್ಪ ಬೆನ್ನೂರ ಮತ್ತಿತರರು ಪಾಲ್ಗೊಂಡಿದ್ದರು.