

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಜಗದೀಶ ನಿಂಗಪ್ಪ ಬಳ್ಳಾರಿ (37) ಮೃತ ರೈತ.
ಇವರು 5 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕಳೆದ ವರ್ಷ ಮಳೆ ಹೆಚ್ಚಾದ ಕಾರಣ ಬೆಳೆಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.