

ಹಿರೇಕೆರೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬಲೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಭೀಮರೆಡ್ಡಿ ಹಾಲಪ್ಪ ಸಂಕ್ಲಾಪುರ (33) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 6.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.