VIDEO | ತುರ್ತು ಚಿಕಿತ್ಸಾ ವಿಭಾಗದಲ್ಲೇ ರೋಗಿಯ ಸಂಬಂಧಿಕರು, ಭದ್ರತಾ ಸಿಬ್ಬಂದಿ ನಡುವೆ ಮಾರಾಮಾರಿ..!

emeragancy
ಸಾಂದರ್ಭಿಕ ಚಿತ್ರ
Published on

ಫರೀದ್‌ಕೋಟ್: ಸೆಕ್ಯುರಿಟಿ ಗಾರ್ಡ್‌ಗಳು ರೋಗಿಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಪಂಜಾಬ್​ನ ಫರೀದ್​ಕೋಟ್​ ಎಂಬಲ್ಲಿ ನಡೆದಿದೆ.

ಗುರು ಗೋಬಿಂದ್ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಈ ಘಟನೆ ನಡೆದಿದ್ದು, ಈ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಮಾರಾಮಾರಿ ನಡೆದಿದ್ದು, ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್‌ಗಳು ರೋಗಿಯೊಬ್ಬರ ಸಂಬಂಧಿಕರಿಬ್ಬರ ಮೇಲೆ ತಳ್ಳುವುದು, ಕಪಾಳಮೋಕ್ಷ ಮಾಡುವುದು ಮತ್ತು ಗುದ್ದಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.


ಈ ಬಗ್ಗೆ ವೈದ್ಯಕೀಯ ಅಧೀಕ್ಷಕ ಆಸ್ಪತ್ರೆಯಲ್ಲಿ ಘಟನೆ ನಡೆದಿರುವುದನ್ನು ಖಚಿತಪಡಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಹಿಳಾ ರೋಗಿ ಆಸ್ಪತ್ರೆಗೆ ದಾಖಲಾಗಿದ್ದು ಆಕೆ ತೀರಿಕೊಂಡಿದ್ದಳು. ಮೃತ ರೋಗಿಯ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕೋಪಗೊಂಡು ವೈದ್ಯರೊಂದಿಗೆ ವಾಗ್ವಾದ ನಡೆಸಿದರು. ಆಗ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳವನ್ನು ನಿಲ್ಲಿಸಿದರು ಎಂದು ಹೇಳಿದ್ದಾರೆ. ಏತನ್ಮಧ್ಯೆ, ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸ್ ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net