ಗುಂಡ್ಲುಪೇಟೆ: ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.13 ರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲು ರೈತ ಸಂಘಟನೆ ನಿರ್ಧರಿಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಹೇಳಿದರು.
ಕೆರೆಗಳಿಗೆ ನೀರು ತುಂಬಿಸುವುದು, 50-60 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ನೀಡಲು ಅರಣ್ಯ ಇಲಾಖೆಯಿಂದ ಎನ್‌ಒ.ಸಿ. ನೀಡುವುದು. ಸಾಗುವಳಿ ನೀಡಿರುವ ರೈತರಿಗೆ ಪಹಣಿ ನೀಡಿ, ಹದ್ದುಬಸ್ತು, ದುರಸ್ತು ಮಾಡುವುದರ ಜತೆಗೆ ರೈತರ ಕೃಷಿ ಭೂಮಿ ಉಳಿಸಿ, ಬರಡು ಪ್ರದೇಶವನ್ನು ಸಮಗ್ರ ಅಭಿವೃದ್ಧಿಪಡಿಸಲು, ಗಾಂಧೀಜಿ ಅವರ ಗ್ರಾಮೀಣ ಅಭಿವೃದ್ಧಿ ಕನಸು ನನಸಾಗಿಸಲು ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸುವುದಾಗಿ ತಿಳಿಸಿದರು.
ತಾಲೂಕು ಅಧ್ಯಕ್ಷ ದಿಲೀಪ್, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷ ನಾಗರಾಜು, ಕಾರ್ಯಾಧ್ಯಕ್ಷ ಮಹದೇವಪ್ಪ, ಕಾರ್ಯದರ್ಶಿ ಮಹೇಂದ್ರ, ಮಹದೇವಸ್ವಾಮಿ, ಪುಟ್ಟೇಗೌಡ, ಪ್ರಕಾಶ್, ಮಹದೇವೇಗೌಡ ಇದ್ದರು.