

ಶಿಕಾರಿಪುರ: ಶಿಕಾರಿಪುರವನ್ನು ಬರಗಾಲಪೀಡಿತ ತಾಲೂಕು ಎಂದು ಘೋಷಿಸಬೇಕು ಮತ್ತು ರೈತರ ಸಾಲ ಮನ್ನಾ ಮಾಡಬೇಕು ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಸುರೇಶ್ ಸರ್ಕಾರಕ್ಕೆ ಒತ್ತಾಯಿದರು. ಸರ್ಕಾರ ಕೂಡಲೆ ರೈತರ ನೆರವಿಗೆ ಧಾವಿಸಬೇಕು. ಮೆಕ್ಕೆಜೋಳ ಸಂಪೂರ್ಣ ಹಾಳಾಗಿದ್ದು ತಕ್ಷಣ ಬರಗಾಲಪೀಡಿತ ತಾಲೂಕು ಎಂದು ಘೋಷಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಅ.20ರಂದು ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದರು. ಗ್ರಾಪಂ ಮಟ್ಟದಲ್ಲಿಯೇ ರೈತರಿಗೆ ಎಲ್ಲ ಸವಲತ್ತುಗಳು ಸಿಗುವಂತೆ ಮಾಡಬೇಕು. ಶಿಕಾರಿಪುರ ಹುಚ್ಚರಾಯಸ್ವಾಮಿ ದೇವಸ್ಥಾನ, ಸೊರಬ ಚಂದ್ರಗುತ್ತಿ ದೇವಸ್ಥಾನದಲ್ಲಿ ಯಾತ್ರಿ ನಿವಾಸ ಆಗಬೇಕು. ಸಮರ್ಪಕ ಕುಡಿಯುವ ನೀರು, ಶೌಚಗೃಹ ಸೇರಿ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ವಿನಾಯಕ, ಎಸ್.ವಿ.ಕೆ. ಮೂರ್ತಿ ಇದ್ದರು.