ರೇಣುಕಾಂಬೆ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ

srb kathika
ಸೊರಬ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು.
Published on

ಸೊರಬ: ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು.

ದೇವಸ್ಥಾನಕ್ಕೆ ಆಕರ್ಷಕ ವಿದ್ಯುತ್ ದೀಪ, ಪುಷ್ಪಾಲಂಕಾರ ಮಾಡಲಾಗಿತ್ತು. ದೇವಸ್ಥಾನದ ಮೆಟ್ಟಿಲುಗಳು ಹಾಗೂ ದೇವಸ್ಥಾನದ ಆವರಣದಲ್ಲಿ ದೀಪಗಳನ್ನು ಬೆಳಗಿಸಲಾಯಿತು. ಪರಿವಾರ ದೇವರುಗಳಾದ ಮಾತಂಗಿ, ಕಾಲಬೈರವ, ನಾಗದೇವತೆ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಗೆ ಮಹಾಮಂಗಳಾರತಿ ಹಾಗೂ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸಾಗರದ ಶ್ರೀ ರಾಘವೇಂದ್ರ ಭಕ್ತಿ ಸಂಗಮ ಕಲಾತಂಡದವರಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಲಕ್ಷ ದೀಪೋತ್ಸವಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾಕುಮಾರಿ ಚಾಲನೆ ನೀಡಿದರು. ಮಹಿಳೆಯರು ದೀಪವನ್ನು ಬೆಳಗಿದರು. ವಾದ್ಯ ಮೇಳಗಳು ಲಕ್ಷ ದೀಪೋತ್ಸವಕ್ಕೆ ಮೆರುಗು ತಂದವು.

ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಸಮಿತಿ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ಎಂ.ಬಿ.ರೇಣುಕಪ್ರಸಾದ್, ಸದಸ್ಯ ಎಂ.ಪಿ.ರತ್ನಾಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net