ಮಾನನಷ್ಟ ಮೊಕದ್ದಮೆ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ| Medha Patkar

ಮೆದಹಅ
Published on

Medha Patkar | ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ‘ನರ್ಮದಾ ಬಚಾವೋ ಆಂದೋಲನ’ದ ನಾಯಕಿಯಾದ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಪೊಲೀಸರು ಶುಕ್ರವಾರ (25) ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ ಏ.23 ರಂದು ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು. ನವೆಂಬರ್ 25, 2000ದಲ್ಲಿ 'ದೇಶಭಕ್ತನ ನಿಜವಾದ ಮುಖ' ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ, ಮೇ 24 ರಂದು, ನ್ಯಾಯಾಲಯವು ಅವರನ್ನು ಮಾನನಷ್ಟದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಅವರ ಹೇಳಿಕೆಗಳಿಂದಾಗಿ ಸಕ್ಸೇನಾ ಅವರ ವೈಯಕ್ತಿಕ ಸಮಗ್ರತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಅವರ ಪಾತ್ರದ ಮೇಲೆ ನೇರ ದಾಳಿಯಾಗಿದೆ ಎಂದು ತೀರ್ಪು ನೀಡಲಾಗಿತ್ತು. ಇನ್ನೂ ಮೇ 3 ರಂದು NBW ಮತ್ತು ಮುಂದಿನ ಪ್ರಕ್ರಿಯೆಗಳ ಕುರಿತು ವರದಿಯನ್ನು ಸಲ್ಲಿಸಿ ಎಂದು ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

ಮೇಧಾ ಪಾಟ್ಕರ್ ತಮ್ಮ ವಿರುದ್ಧ ಹೊರಡಿಸಿದ ಪತ್ರಿಕಾ ಹೇಳಿಕೆಯೊಂದು ಮಾನಹಾನಿಕರವಾಗಿದೆ ಎಂದು ದೂರಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಷೇನಾ ಅವರು 2000ನೇ ಇಸವಿಯಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಆಗ ಸಕ್ಸನಾ ಅವರು ನ್ಯಾಷನಲ್ ಕೌನ್ಸಿಲ್ ಆಫ್ ಸಿವಿಲ್ ಲಿಬರ್ಟೀಸ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದರು.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net