ಪದವಿ ಪರೀಕ್ಷೆ ಒಂದು ತಿಂಗಳು ಮುಂದೂಡಲು ವಿಶ್ವವಿದ್ಯಾಲಯಗಳಿಗೆ ಸೂಚನೆ

Exam
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಕರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ನಿಗದಿತ ಅವಧಿಗೆ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ನಿಗದಿತ ಅವಧಿಯಲ್ಲಿ ಪಠ್ಯಕ್ರಮ ಪೂರ್ಣಗೊಳಿಸಲು ಸಾಧ್ಯವಾಗದಿದ್ದರಿಂದ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net