ಕೊಪ್ಪಳ : ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರೈತರ ಜೀವಾಳವಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಸುವಲ್ಲಿ ವಿಳಂಬ ವಾಗುತ್ತಿದೆ. ಮಳೆಗಾಲ ಆರಂಭವಾಗುವ ಮೊದಲೇ ಕೆಲಸ ಮುಗಿಯದಿದ್ದರೆ ಪಕ್ಷಾತಿತವಾಗಿ ಬೃಹತ್ ಪಾದಯಾತ್ರೆ ನಡೆಸಲಾಗುವುದು,ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗುರ ಎಚ್ಚರಿಕೆ ನೀಡಿದ್ದಾರೆ.