ಅಬಕಾರಿ ನೀತಿ ಹಗರಣ; ಬಂಧನ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್​

Kejriwal Supreme
Published on

ನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯಮಂತ್ರಿ ಕೇಜ್ರಿವಾಲ್​ ಹಿಂಪಡೆದಿದ್ದಾರೆ.

ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಶದಾನ್​ ಫರಾಸತ್​ ಅರ್ಜಿಯ ವಿಚಾರಣೆಯನ್ನು ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಿದರು.

ವಿಚಾರಣಾ ನ್ಯಾಯಾಲಯದಲ್ಲಿ ರಿಮ್ಯಾಂಡ್​ ಪ್ರಕ್ರಿಯೆಗಳು ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ವಿಚಾರಣೆಯೊಂದಿಗೆ ಸಂಘರ್ಷ ಉಂಟಾಗುವುದರಿಂದ ಅರ್ಜಿಯನ್ನು ಹಿಂಪಡೆಯಲು ಅವಕಾಶ ಕೊಡಬೇಕು ಎಂದು ಪೀಠವನ್ನು ಕೋರಿದರು. ಇದರಿಂದ ತಮ್ಮ ಕಕ್ಷಿದಾರರಾದ ಅರವಿಂದ್​ ಕೇಕಜ್ರಿವಾಲ್​ ಅವರು ವಿಚಾರಣಾ ನ್ಯಾಯಾಲಯದಲ್ಲಿ ರಿಮಾಂಡ್ ಪ್ರಕ್ರಿಯೆಗಳು ಮುಗಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಸುತ್ತೇವೆ ಎಂದು ಅರ್ಜಿದಾರರ ಪರ ವಕೀಲ ಅಭಿಷೇಕ್​ ಮನು ಸಿಂಘ್ವಿ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೆಶನಾಲಯದ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net