

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಇದೀಗ ಮಧ್ಯಂತರ ಜಾಮೀನು ಘೋಷಿಸಿದ ಸುಪ್ರೀಂಕೋರ್ಟ್ ಜೂನ್ 01ರವರೆಗೂ ಜಾಮೀನು ಮಂಜೂರು ಮಾಡಿದೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೋರ್ಟ್ ಜಾಮೀನು ಅರ್ಜಿಯನ್ನು ಮುಂದೂಡಿತ್ತು.
ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಜೂನ್ 01ರವರೆಗೂ ಚುನಾವಣಾ ಪ್ರಚಾರ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ ಎಂದು ಕೇಜ್ರಿವಾಲ್ಗೆ ತಿಳಿಸಿದೆ. ಈ ಮೂಲಕ ಬಿಗ್ ರಿಲೀಫ್ ಪಡೆದ ದೆಹಲಿ ಸಿಎಂಗೆ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.