

ನವದೆಹಲಿ: ದೆಹಲಿಯ ಓಲ್ಡ್ ರಾಜೇಂದ್ರ ನಗರದಲ್ಲಿರುವ ‘ರೌಸ್ ಐಎಎಸ್ ಕೋಚಿಂಗ್ ಸೆಂಟರ್’ನ ನೆಲಮಾಳಿಗೆಯು ಜಲಾವೃತವಾಗಿ 3 ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮಯಕ್ಕೆ ಸರಿಯಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಯನ್ನು ನೇಮಿಸುವಂತೆ ನ್ಯಾಯಾಲಯವು ಕೇಂದ್ರ ಜಾಗೃತ ಆಯುಕ್ತರಿಗೆ ನಿರ್ದೇಶಿಸಿದೆ.
ಘಟನೆಯ ಸ್ವರೂಪ ಮತ್ತು ತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಸಂದೇಹವಿಲ್ಲ ಎಂದು ಖಚಿತಪಡಿಸಿಕೊಳ್ಳಲು, ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತದೆ ಹೇಳಿದೆ.
ದೆಹಲಿಯಲ್ಲಿನ ಚರಂಡಿಯಂತಹ ಭೌತಿಕ ಮೂಲಸೌಕರ್ಯಗಳು ಸಮರ್ಪಕವಾಗಿಲ್ಲ. ಆದರೆ ಕಳಪೆಯಾಗಿ ನಿರ್ವಹಣೆ ಮಾಡುತ್ತಿವೆ. ಇತ್ತೀಚಿನ ದುರಂತಗಳು ನಾಗರಿಕ ಸಂಸ್ಥೆಗಳಿಗೆ ನೀಡಿದ ಆದೇಶಗಳನ್ನು ಪಾಲಿಸುತ್ತಿಲ್ಲ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಇದೇ ಸಂದರ್ಭದಲ್ಲಿ ದುರ್ಘಟನೆ ಸಂಬಂಧ ನ್ಯಾಯಾಲಯವು ಪೊಲೀಸರು ಹಾಗು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ನ್ನು ತರಾಟೆಗೆ ತೆಗೆದುಕೊಂಡಿತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ಎಂಸಿಡಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ, ಇದು ರೂಢಿಯಾಗಿದೆ ಎಂದು ಹೇಳಿದರು.
ಬಳಿಕ ಕೋಚಿಂಗ್ ಇನ್ಸ್ಟಿಟ್ಯೂಟ್ಗೆ ನುಗ್ಗಿದ ಎಸ್ಯುವಿ ಚಾಲಕನನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಉಲ್ಲೇಖಿಸಿದ ನ್ಯಾಯಾಲಯ, ನೀವು ಎಸ್ಯುವಿ ಚಾಲಕನನ್ನು ಅಲ್ಲಿ ಬಂಧಿಸಿದ ರೀತಿಯಲ್ಲಿ ನೆಲಮಾಳಿಗೆಯಲ್ಲಿ ಮಳೆನೀರು ಪ್ರವೇಶಿಸಲು ನೀವು ತಡೆದಿಲ್ಲ ಎಂದು ಕಿಡಿಕಾರಿದರು.
ಜುಲೈ 27 ರಂದು ಓಲ್ಡ್ ರಾಜೀಂದರ್ ನಗರದಲ್ಲಿರುವ ರಾವು ಅವರ ಐಎಎಸ್ ಸ್ಟಡಿ ಸರ್ಕಲ್ನ ನೆಲಮಾಳಿಗೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂನ ನವೀನ್ ಡಾಲ್ವಿನ್ ಅವರು ಐಎಎಸ್ ಕೋಚಿಂಗ್ ಅಕಾಡೆಮಿಯ ನೆಲಮಾಳಿಗೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಹೆಚ್ಚಿದೆ ಎಂದು ವಿದ್ಯಾರ್ಥಿಗಳು ಶಂಕಿಸಿದ್ದು, ನಾವು ಹೆಚ್ಚಿನ ದೇಹಗಳನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ. ಸಾವನ್ನಪ್ಪಿದವರ ಸಂಖ್ಯೆಯ ಕುರಿತು ಪ್ರತಿಭಟನೆ ಮುಂದುವರಿದಿದ್ದು, ಇಂದು ಮೂಲವ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.