ಅಬಕಾರಿ ನೀತಿ ಪ್ರಕರಣ: ಕೆ.ಕವಿತಾಗೆ ಮತ್ತೆ ಹಿನ್ನಡೆ, ಮೇ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

kavitha
Published on

ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ​ 20ರವರೆಗೆ ವಿಸ್ತರಿಸಲಾಗಿದೆ.

ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ರೂಸ್ ಅವೆನ್ಯೂ ಕೋರ್ಟ್​ ನಿರಾಕರಿಸಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.

ದೆಹಲಿ ಮದ್ಯ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೆ. ಕವಿತಾ ಅವರನ್ನು ಹೈದರಾಬಾದ್‌ನಲ್ಲಿರುವ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ ನಂತರ ಅವರನ್ನು ಮಾರ್ಚ್ 15ರಂದು ಬಂಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net