ಮನೀಶ್​​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ: ಸಿಬಿಐ, ಇಡಿಗೆ ಸುಪ್ರೀಂಕೋರ್ಟ್​​ ನೋಟಿಸ್​ ಜಾರಿ

Untitled-design
Published on

ನವದೆಹಲಿ: ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್​​​ ಮಂಗಳವಾರ(ಜುಲೈ 16) ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠವು ಅವರ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಗೂ ನೋಟಿಸ್ ಜಾರಿ ಮಾಡಿದೆ. ಎರಡೂ ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಜಾಮೀನು ಕೋರಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಸೋಡಿಯಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮರುಪರಿಶೀಲಿಸುವಂತೆ ಅವರ ಮನವಿಯನ್ನೂ ಪೀಠವು ವಿಚಾರಣೆ ನಡೆಸುತ್ತಿದೆ.

ಪೀಠದಲ್ಲಿ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಕೂಡ ಇದ್ದಾರೆ. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಸೋಡಿಯಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮರುಪರಿಶೀಲಿಸುವಂತೆ ಅವರ ಮನವಿಯನ್ನೂ ಪೀಠವು ವಿಚಾರಣೆ ನಡೆಸುತ್ತಿದೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು 2023 ಫೆಬ್ರವರಿ 26ರಂದು ಸಿಬಿಐ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್​ಐಆರ್​​ ಮೇರೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಸಿಸೋಡಿಯಾ ಅವರನ್ನು 2023 ಮಾರ್ಚ್ 9ರಂದು ಬಂಧಿಸಿತ್ತು. ಕಳೆದ ವರ್ಷ ಫೆಬ್ರವರಿ 28 ರಂದು ಸಿಸೋಡಿಯಾ ಅವರು ದೆಹಲಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net