ದೆಹಲಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 12ಕ್ಕೆ ಏರಿಕೆ.. Delhi explosion

Delhi explosion
Published on

ನವದೆಹಲಿ: ದೆಹಲಿಯ (Delhi explosion) ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರು ಸ್ಫೋಟ ಸಂಭವಿಸಿದ್ದು, ಈ ಪ್ರದೇಶದಲ್ಲಿ ಭೀತಿ ಉಂಟಾಗಿದೆ. ಸ್ಫೋಟದಲ್ಲಿ ಸಾವನ್ನೊಪ್ಪಿದವರ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ. 29 ಜನರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 12 ಕ್ಕೆ ತಲುಪಿದೆ. ಈ ಘಟನೆಯಲ್ಲಿ ಈಗಾಗಲೇ 9 ಜನರು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಇನ್ನೂ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ 17 ಜನರು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ ನಿನ್ನೆ ತಡರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಅವರು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು. ದೆಹಲಿ ಪೊಲೀಸರು, ಎಸ್‌ಎಫ್‌ಎಲ್ ತಂಡ, ಎನ್‌ಐಎ ಮತ್ತು ಎನ್‌ಎಸ್‌ಜಿ ಕೂಡ ಈ ವಿಷಯದ ಬಗ್ಗೆ ತನಿಖೆ ಆರಂಭಿಸಿವೆ. ಹರಿಯಾಣ ಸಂಖ್ಯೆ ಹೊಂದಿರುವ ಐ -20 ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಭದ್ರತಾ ಸಂಸ್ಥೆಗಳೊಂದಿಗೆ ದೊಡ್ಡ ಸಭೆ ನಡೆಸಲಿದ್ದಾರೆ.

ಈ ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿವಿಧ ಕೋನಗಳಿಂದ ತನಿಖೆಯನ್ನು ಕೈಗೆತ್ತಿಕೊಂಡಿರುವ ಅಧಿಕಾರಿಗಳು, ಇದು ಭಯೋತ್ಪಾದಕ ಕೃತ್ಯ ಎಂದು ಶಂಕಿಸಿದ್ದಾರೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟವು ಆತ್ಮಹತ್ಯಾ ದಾಳಿ ಎಂದು ಅಧಿಕೃತ ಮೂಲಗಳು ಹೇಳುತ್ತಿವೆ.

ಕಾರನ್ನು ಪುಲ್ವಾಮಾದ ಡಾ. ಉಮರ್ ಎಂದು ಗುರುತಿಸಲಾಗಿದೆ. ನಿನ್ನೆ ಕಾರಿನಲ್ಲಿದ್ದ ವ್ಯಕ್ತಿ ಡಾ. ಉಮರ್ ಎಂದು ಆರಂಭದಲ್ಲಿ ದೃಢಪಡಿಸಲಾಗಿತ್ತು. ಡಾ. ಉಮರ್ ಪುಲ್ವಾಮಾದ ವ್ಯಕ್ತಿ. ಅವರು ಶ್ರೀನಗರದ ಎಂಡಿ ವೈದ್ಯಕೀಯ ಕಾಲೇಜು ಮತ್ತು ಜಿಎಂಸಿ ಅನಂತನಾಗ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಅಲ್ಫಾಲ ಪ್ರಸ್ತುತ ಫರಿದಾಬಾದ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ತಿಂಗಳು ಅಮೀರ್ ಹೆಸರಿನಲ್ಲಿ ವಾಹನವನ್ನು ಖರೀದಿಸಿದ ಡಾ. ಉಮರ್, ಸ್ಫೋಟಕ್ಕೆ ಅದೇ ವಾಹನವನ್ನು ಬಳಸಿದ್ದಾರೆಂದು ಆರೋಪಿಸಲಾಗಿದೆ.

ಸೋಮವಾರ ಏನಾಯಿತು?

ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಬಳಿ ಇಂದು(ನ. 10) ಸಂಜೆ 6.30ರ ಸುಮಾರಿಗೆ ಕಾರೊಂದು ಸ್ಫೋಟಗೊಂಡಿದ್ದು, ಪಕ್ಕದಲ್ಲಿ 7ರಿಂದ 8 ಕಾರುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, ಸುಮಾರು ಜನ ಗಾಯಗೊಂಡಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಪಕ್ಕದಲ್ಲಿದ್ದ 7 ರಿಂದ 8 ವಾಹನಗಳು ಸಹ ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ.ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡು, ಹಲವಾರು ವಾಹನಗಳು ಮತ್ತು ಜನರಿಗೆ ಡಿಕ್ಕಿ ಹೊಡೆದಿದೆ. ಹಠಾತ್ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತು, ಜನರು ಓಡಿಹೋದರು. 

ತಕ್ಷಣ ಸ್ಥಳಕ್ಕೆ ಸುಮಾರು 20 ಅಗ್ನಿಶಾಮಕದಳ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ. ಗಾಯಾಳುಗಳಮನ್ನು ಹತ್ತಿರದ ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ದಳವು ಘಟನಾ ಸ್ಥಳಕ್ಕೆ ತಲುಪಿದ್ದು ಪರಿಶೀಲಿಸುತ್ತಿದ್ದಾರೆ.

ಸೋಮವಾರ ದೆಹಲಿ ಸ್ಫೋಟದ ಬಗ್ಗೆ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. “ದೆಹಲಿಯಲ್ಲಿ ಇಂದು ಸಂಜೆ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅಧಿಕಾರಿಗಳು ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ” ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net