ಮಳೆಯ ಅವಾಂತರಕ್ಕೆ ಲಕ್ಷಾಂತರ ರೂ. ನಷ್ಟ!; ಪ್ರವಾಹದಿಂದ ತತ್ತರಿಸಿದ ವ್ಯಾಪಾರಸ್ಥರ ಅಳಲು

Untitled design (52)
Published on

ನವದೆಹಲಿ: ನವದೆಹಲಿಯಲ್ಲಿ ಉಂಟಾದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರಕ್ಕೆ ವ್ಯಾಪಾರಸ್ಥರು ಲಕ್ಷಾಂತರ ರೂ. ಮೌಲ್ಯದ ನಷ್ಟವನ್ನು ಅನುಭವಿಸುತ್ತಿದ್ದಾರೆ.

ಕಳೆದ ಒಂದು ವಾರದಿಂದ ನವದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಯಮುನಾ ನದಿಯು ಮೈದುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಮಳೆಯ ಆರ್ಭಟದಿಂದ ರಾಷ್ಟ್ರ ರಾಜಧಾನಿ ತತ್ತರಿಸಿದ್ದು, ಹಲವಾರು ಭಾಗಗಳಲ್ಲಿ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ನಗರದಲ್ಲಿನ ಸ್ಥಳೀಯ ವ್ಯಾಪಾರಿಗಳು ಮತ್ತು ಮಾರುಕಟ್ಟೆಗಳು ಭಾರಿ ನಷ್ಟವನ್ನು ಅನುಭವಿಸಿವೆ.

ದೆಹಲಿಯ ಜನಪ್ರಿಯ ಮೊನಾಸ್ಟರಿ ಮಾರುಕಟ್ಟೆ ನಿರಂತರ ಮಳೆಯಿಂದ ಶಿಥಿಲಗೊಂಡಿದ್ದು, 150ಕ್ಕೂ ಹೆಚ್ಚು ಅಂಗಡಿಗಳು, ಬಟ್ಟೆ ಮತ್ತು ಪೀಠೋಪಕರಣಗಳು ನಾಶವಾಗಿವೆ. ಭಾರೀ ನಷ್ಟದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಂಡಿದ್ದೇವೆ. ಇದರಿಂದ ಮುಂದೇನು ಮಾಡಬೇಕು ಎಂಬುದು ತಿಳಿಯುತ್ತಿಲ್ಲ ಎಂದು ವ್ಯಾಪಾರಸ್ಥರು ತಮ್ಮ ಅಳಲು ತೊಡಿಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net