88 ವರ್ಷಗಳಲ್ಲಿ ನೋಡದ ರಣಭೀಕರ ಮಳೆ! ವಿಮಾನ ಹಾರಾಟ ಸ್ಥಗಿತ: ತುರ್ತು ಸಭೆ ಕೈಗೊಂಡ ದೆಹಲಿ ಸರ್ಕಾರ

Untitled design - 2024-06-28T144231.227
Published on

ನವದೆಹಲಿ: ಇಂದು ಬೆಳಗ್ಗೆಯಿಂದಲೇ ಸುರಿಯುತ್ತಿರುವ ಧಾರಕಾರ ಮಳೆಗೆ ದೆಹಲಿ-ಎನ್​ಸಿಆರ್​ ತತ್ತರಿಸಿದೆ. ಸಿಡಿಲು, ಗುಡುಗಿನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಮಳೆಗೆ ಜಲಾವೃತಗೊಂಡಿವೆ. ಮಳೆಯ ಆರ್ಭಟಕ್ಕೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಛಾವಣಿ ಕುಸಿದು ಓರ್ವ ಸಾವಿಗೀಡಾಗಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ.

ಭಾರೀ ಮಳೆಗೆ ಹಲವಾರು ಕಾರುಗಳು ಅವಶೇಷಗಳಡಿ ಸಿಲುಕಿವೆ. ಬೆಳಿಗ್ಗೆ 5:30ರ ಸುಮಾರಿಗೆ ಸಂಭವಿಸಿದ ಈ ಘಟನೆಯ ಬೆನ್ನಲ್ಲೇ ದೆಹಲಿ ಅಗ್ನಿಶಾಮಕ ದಳ, ಮೂರು ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆ. ರಾಜಧಾನಿಯ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, ಜನರು ಮನೆಯಿಂದ ಹೊರಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂದಿನ 7 ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹೊಸ ಪ್ರಕಟಣೆಯಲ್ಲಿ ತಿಳಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net