ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಹೊಸ ಮಸೂದೆ!| Delhi Govt

Untitled design (39) (1)
Published on

 Delhi Govt: ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳವನ್ನು ನಿಯಂತ್ರಿಸಲು ಮತ್ತು ಮೇಲ್ವಿಚಾರಣೆ ನಡೆಸಲು, ದೆಹಲಿ ಸರ್ಕಾರವು ಮುಂಬರುವ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ವಾರ್ಷಿಕ ಶುಲ್ಕ ಹೆಚ್ಚಳದ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನು ಅಧಿಕೃತ ಅನುಮೋದನೆಯಿಲ್ಲದೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಕರಡು ಮಸೂದೆಯು ಶಾಲೆಗಳು ತಮ್ಮ ಶುಲ್ಕವನ್ನು ಹೇಗೆ ನಿರ್ಧರಿಸುತ್ತವೆ ಎಂಬುದರಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ಈ ಹೊಸ ಪ್ರಯತ್ನ ನಡೆಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಅನುಮೋದಿಸದ ಶುಲ್ಕ ಹೆಚ್ಚಳವನ್ನು ಕಡಿಮೆ ಮಾಡುವುದು ಮಸೂದೆಯ ಉದ್ದೇಶವಾಗಿದೆ.

ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಖಾಸಗಿ ಶಾಲೆಗಳು ಪ್ರತಿ ವರ್ಷ ಶುಲ್ಕವನ್ನು ಏರಿಕೆ ಮಾಡುತ್ತಿರುವುದರಿಂದ, ಪೋಷಕರ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ.

ದೆಹಲಿ ರಾಜ್ಯ ಸರ್ಕಾರದಿಂದ ಮೊದಲು ಅನುಮತಿ ಪಡೆಯದೆ, ಯಾವುದೇ ಖಾಸಗಿ ಶಾಲೆಯು ತನ್ನ ಶುಲ್ಕ ರಚನೆಯನ್ನು ಪರಿಷ್ಕರಿಸಲು ಅನುಮತಿಸುವುದಿಲ್ಲ ಎಂಬ ನಿಬಂಧನೆಯನ್ನು ಈ ಹೊಸ ಕಾನೂನು ಒಳಗೊಂಡಿರುವ ನಿರೀಕ್ಷೆಯಿದೆ.ಈ ಮಸೂದೆಯು ಶಿಕ್ಷಣ ಇಲಾಖೆಗೆ ಶಾಲಾ ಹಣಕಾಸು ಮತ್ತು ಶುಲ್ಕ ಸಂಗ್ರಹ ವ್ಯವಸ್ಥೆಗಳ ಲೆಕ್ಕಪರಿಶೋಧನೆ ನಡೆಸುವ ಅಧಿಕಾರ ನೀಡಲಿದ್ದು, ಈ ಮಾನದಂಡಗಳನ್ನು ಉಲ್ಲಂಘಿಸುವ ಶಾಲೆಗಳು ಭಾರಿ ದಂಡ ಮತ್ತು ಮಾನ್ಯತೆ ರದ್ದತಿ ಸೇರಿದಂತೆ ಬೇರೆ ರೀತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಕರಡು ಸಿದ್ಧವಾಗಿದ್ದು, ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ,

ಜಂತರ್ ಮಂತರ್ ಪ್ರತಿಭಟನೆಯ ನಂತರ ಪೋಷಕರಿಂದ ಸುಧಾರಣೆಗಳ ಬೇಡಿಕೆ

ಜುಲೈ 20 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಇತ್ತೀಚಿನ ಪ್ರತಿಭಟನೆಯ ನಂತರ ಸರ್ಕಾರ ಈ ನಿರ್ಣಯಕ್ಕೆ ಬಂದಿದ್ದು, ಖಾಸಗಿ ಶಾಲೆಗಳ ಅತಿರೇಕದ ಶುಲ್ಕ ಏರಿಕೆಯ ವಿರುದ್ಧ ಹಲವಾರು ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net