ಅಬಕಾರಿ ನೀತಿ ಹಗರಣ: ಕೆ. ಕವಿತಾ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿ ತಿರಸ್ಕೃತ!

kavitha
Published on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆಯ ಎರಡು ಪ್ರಕರಣಗಳಲ್ಲಿ ಬಂಧನದಲ್ಲಿರುವ ಬಿಆರ್​ಎಸ್​ ನಾಯಕಿ ಕೆ. ಕವಿತಾ ಅವರು ಸಲ್ಲಿಸಿದ್ದ ಎರಡು ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಮೇ 28 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ತೀರ್ಪನ್ನು ಕಾಯ್ದಿರಿಸಿದ್ದರು.

ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣ ಮತ್ತು ಇಡಿ ವಿಚಾರಣೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡಲು ನಿರಾಕರಿಸಿದ್ದವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕವಿತಾ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಕವಿತಾ ಜಾಮೀನು ಅರ್ಜಿಗೆ ಸಿಬಿಐ ಮತ್ತ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದವು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ 50 ಆರೋಪಿಗಳ ಕವಿತಾ ಒಬ್ಬರೇ ಮಹಿಳೆ. ಇದರಿಂದ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕು ಎಂದು ಕವಿತಾ ಪರ ವಕೀಲರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್​ 15 ರಂದು ಜಾರಿ ನಿರ್ದೇಶನಾಲಯ ಬಿಆರ್​ಎಸ್ ನಾಯಕಿ ಕೆ.ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net