

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಹಾಗೂ ದಿಲ್ಲಿ ಆರೋಗ್ಯ ಸಚಿವರಾಗಿರುವ ಸತ್ಯೆಂದ್ರ ಜೈನ್ ಅವರನ್ನು ಸದ್ಯ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲಾಗಿದೆ.
ಅಕ್ರಮ ಹಣ ವರ್ಗಾವಣರ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು, ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಜೂನ್ 9 ರವರೆಗೆ ಇಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಕೇಜ್ರಿವಾಲ್ ಸಂಪುಟದ ಆರೋಗ್ಯ ಸಚಿವರಾಗಿದ್ದ ಜೈನ್, ಗೃಹ ಮತ್ತು ವಿದ್ಯುತ್ ಖಾತೆಯನ್ನೂ ನಿರ್ವಹಿಸುತ್ತಿದ್ದು, ಕೇಜ್ರಿವಾಲ್ ಆಪ್ತರಲ್ಲಿ ಇವರೂ ಕೂಡ ಒಬ್ಬರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಸಚಿವರ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿದಿದ್ದೇವೆ, ಇದರಲ್ಲಿ ಸತ್ಯೆಂದ್ರ ಜೈನ್ ಪಾತ್ರ ಏನೂ ಇಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್)