ಉಪವಾಸ ಪ್ರತಿಭಟನೆ ಕೈಬಿಟ್ಟ ದೆಹಲಿ ಸಚಿವೆ ಆಸ್ಪತ್ರೆಗೆ ದಾಖಲು: ಎಎಪಿ

Untitled design - 2024-06-25T110226.336
Published on

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಬಿಕ್ಕಟ್ಟಿನ ಹಿನ್ನೆಲೆ ಕಳೆದ ಆರು ದಿನಗಳಿಂದ ದೆಹಲಿ ಜಲ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದರು. ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ಹಲವರು ಈ ಮುಷ್ಕರ ಇಲ್ಲಿಗೆ ನಿಲ್ಲಿಸಿ ಎಂದು ಮನವಿ ಮಾಡಿಕೊಂಡರು ಸಹ ತಲೆಕೆಡಿಸಿಕೊಳ್ಳದೆ, ಮುಂದುವರೆಸಿಕೊಂಡು ಹೋದ ಅತಿಶಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟ ಮತ್ತಷ್ಟು ಕುಸಿದಿತ್ತು. ಆದ್ರೆ, ಅದನ್ನು ಮೀರಿ ಪ್ರತಿಭಟನೆಗೆ ಕುಳಿತ ಸಚಿವೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರಾಗಿದೆ. ನೀವು ತಕ್ಷಣವೇ ಈ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವುದು ಉತ್ತಮ ಎಂದು ವೈದ್ಯರು ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಜನರಿಗೆ ಸೀರು ಸಿಗುವವರೆಗೂ ನಾನು ಉಪವಾಸ ಅಂತ್ಯಗೊಳಿಸುವ ಮಾತೇ ಇಲ್ಲ ಎಂದು ಕುಳಿತ್ತಿದ್ದ ಅತಿಶಿ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಇಂದು (ಜೂ.25) ಮುಂಜಾನೆ ಅವರನ್ನು ದಹೆಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮಾಹಿತಿ ಹಂಚಿಕೊಂಡಿದೆ.

ಕುಡಿಯುವ ನೀರಿನ ಪೂರೈಕೆಗಾಗಿ ದೆಹಲಿಯು ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ಅವಲಂಬಿಸುವಂತಾಗಿದೆ. ನಮ್ಮ ಜನಕ್ಕೆ ನೀರಿನ ಪೂರೈಕೆ ಮಾಡಿಕೊಡಿ ಎಂದು ಆಗ್ರಹಿಸಿ, ಶುಕ್ರವಾರ (ಜೂ.21) ದಕ್ಷಿಣ ದೆಹಲಿಯ ಭೋಗಲ್‌ನಲ್ಲಿ ಅತಿಶಿ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದರು. ಆದರೆ, ಇದೀಗ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net