186 ಮಂದಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ : ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ

Untitled-design-1-1
Published on

ನವದೆಹಲಿ : ರಾಷ್ಟ್ರರಾಜಧಾನಿಯಿಂದ ಮುಂಬೈಗೆ ತೆರಳುತ್ತಿದ್ದ ಆಕಾಶ್​ ಏರ್​ ಫ್ಲೈಟ್​ಗೆ ಬಾಂಬ್​ ಬೆದರಿಕೆ ಬಂದಿದೆ. ತಕ್ಷಣವೆ ಭದ್ರತಾ ಎಚ್ಚರಿಕೆ ಕಾರಣದಿಂದ ಅಹಮದಾಬಾದ್​ಗೆ ಮಾರ್ಗ ಬದಲಾಯಿಸಲಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ನಂತರ ಎಲ್ಲಾ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಗೆ ಕರೆದೊಯ್ದು, ಸ್ಥಳಕ್ಕೆ ಶ್ವಾನ ದಳದ ತಂಡವನ್ನು ಕರೆಸಿ ಪ್ರಯಾಣಿಕರ ಲಗೇಜ್ ಪರಿಶೀಲಿನೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ಫ್ಲೈಟ್ QP 1719ರಲ್ಲಿ ಒಂದು ಶಿಶು ಸೇರಿದಂತೆ 186 ಮತ್ತು 6 ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ವಿಮಾನದಲ್ಲಿ ಭದ್ರತಾ ಎಚ್ಚರಿಕೆ ದೊರೆತ ನಂತರ ಅದನ್ನು ಅಹಮದಾಬಾದ್ ಕಡೆಗೆ ಮಾರ್ಗ ಬದಲಾಯಿಸಲಾಯಿತು. ವಿಮಾನದ ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳನ್ನು ಅನುಸರಿಸಿದ್ದರು. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10:13ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಆಕಾಶ ಏರ್‌ನ ವಕ್ತಾರರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ಬೆದರಿಕೆಗಳಿಂದಾಗಿ ವಿವಿಧ ವಿಮಾನಯಾನ ಸಂಸ್ಥೆಗಳ ಹಲವಾರು ವಿಮಾನಗಳ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್​ ಬೆದರಿಕೆ ಪತ್ರ ಸಿಕ್ಕಿದ ಬಳಿಕ 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳೊಂದಿಗೆ ಮುಂಬೈಗೆ ಹೊರಟಿದ್ದ ವಿಸ್ತಾರಾ ವಿಮಾನವನ್ನು ಲ್ಯಾಂಡಿಂಗ್ ಮಾಡಿಲಾಯಿತು.

ವಾರಣಾಸಿ-ದೆಹಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ಮಾಡಿದ ತಕ್ಷಣ ಅಧಿಕಾರಿಗಳು ತಕ್ಷಣ ಕ್ರಮಕೈಗೊಂಡಿದ್ದರು. ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆ ಬಂದಿದ್ದು , ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net