

ದೆಹಲಿ: 16 ವರ್ಷದ ಗೆಳತಿಗೆ 20 ಬಾರಿ ಇರಿದು ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿಹಾಕಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿತ್ತು. ಕೃತ್ಯ ಎಸಗಿದ ಆರೋಪಿ ಕೂಡಲೇ ಪರಾರಿಯಾಗಿದ್ದ. ಆದರೆ, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
20 ವರ್ಷದ ಸಾಹಿಲ್ ಬಂಧಿತ ಆರೋಪಿಯಾಗಿದ್ದು, ಈತ ಸಾಕ್ಷಿ ಎನ್ನುವ ಹಿಂದೂ ಯುವತಿಯನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿದ್ದ. ಸಾಹಿಲ್ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಂಧಿಸಲಾಗಿದ್ದು, ಆರೋಪಿ ಪತ್ತೆಗೆ ದೆಹಲಿ ಪೊಲೀಸರು ಆರು ತಂಡಗಳನ್ನು ರಚಿಸಿದ್ದರು.
ಆರೋಪಿಯು ಬಾಲಕಿಯನ್ನು ಕೊಲೆಗೈದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಜತೆಗ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ವೈರಲ್ ಆಗಿತ್ತು. ಬಳಿಕ ಮೃತದೇಹದ ವಶಕ್ಕೆ ಪಡೆದ ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಆರೋಪಿ ಸಾಹಿಲ್ ಹಾಗೂ ಸಾಕ್ಷಿ ಎಂಬ ಬಾಲಕಿಯ ನಡುವಿನ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)