ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಪೊಲೀಸರಿಂದ ವರದಿ ಸಲ್ಲಿಕೆ

Brij Bhushan Sharan Singh
Published on

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ಚಾರ್ಜ್‌ಶೀಟ್​​ನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಜುಲೈ 4ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪಗಳಿಗೆ ಯಾವುದೇ ಸಹಕಾರಿ ಸಾಕ್ಷಿಗಳಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್‌ಗೆ ಪ್ರಕರಣ ರದ್ದತಿ ವರದಿಯನ್ನು ಪೊಲೀಸರು ಸಲ್ಲಿಸಿದ್ದಾರೆ.

ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೋಕ್ಸೋ ಕಾಯ್ದೆ ಅಡಿ ಅಪ್ರಾಪ್ತ ವಯಸ್ಸಿನ ಬಾಲಕಿ ದಾಖಲಿಸಿದ್ದ ದೂರಿನ ರದ್ದತಿ ವರದಿಯನ್ನು ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ದೂರಿಗೆ ಪೂರಕವಾಗಿ ಯಾವುದೇ ಪುರಾವೆ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ದಿಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net