ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

delhi voilenc feb 26
Published on

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಗಲಭೆಗೆ ತಿರುಗಿ ಸಂಭವಿಸಿದ ಸಾವಿನ ಸಂಖ್ಯೆ ಈಗ 20ಕ್ಕೆ ಏರಿಕೆಯಾಗಿದೆ.

ಗಲಭೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ ಪರ ಹಾಗೂ ವಿರೋಧ ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿ ಹಿಂಸಾಚಾರ ಇಡೀ ಜಾಫ್ರಬಾದ್​ ಪ್ರದೇಶಕ್ಕೆ ವ್ಯಾಪಿಸಿತು. ಪ್ರತಿಭಟನಾಕಾರರು ವಾಹನಗಳು ಹಾಗೂ ಮನೆಗಳಿಗೆ ಬೆಂಕಿ ಹಚ್ಚಿದರು. ಹಿಂಸೆಯಲ್ಲಿ ಓರ್ವ ಮುಖ್ಯಪೇದೆ ಸೇರಿದಂತೆ ಇಲ್ಲಿವರೆಗೆ 20 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗರಿಕರಿಗೆ ರಕ್ಷಣೆ ನೀಡುವುದರ ಜತೆಗೆ ಗಲಭೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡುವಂತೆ ಮಂಗಳವಾರ ಮಧ್ಯರಾತ್ರಿ ಪ್ರಕರಣ ನಡೆಸಿದ ದೆಹಲಿ ಹೈಕೋರ್ಟ್​ ಪೊಲೀಸರಿಗೆ ಸೂಚನೆ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net